ವಿಟ್ಲ: ಬಾಲಕ ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ವಿಟ್ಲ ಸಮೀಪ ಕೊಳ್ನಾಡು ಎಂಬಲ್ಲಿ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಬಾಲಕ.
ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ಸೈಕಲ್ ನಿಯಂತ್ರಣ ತಪ್ಪಿ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.
ಸರಕಾರಿ ಹಿರಿಯ ತಾಳಿತ್ತನೂಜಿಯ ವಿದ್ಯಾರ್ಥಿಯಾಗಿದ್ದ ಆಸಿಪ್ ಶಾಲೆಯ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ಬಾಲಕನಾಗಿದ್ದ. ತಾಯಿಗೆ ಏಕೈಕ ಮಗನಾಗಿದ್ದ ಎಂದು ತಿಳಿದುಬಂದಿದೆ.
























