ಉಪ್ಪಿನಂಗಡಿ : ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಸಾವು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಪದ್ಮುಂಜ ಸಹಕಾರಿ ಸಂಘದ ಹಿರಿಯ ಉದ್ಯೋಗಿ ಚಿದಾನಂದ ಗೌಡ (56) ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವನ್ನಪ್ಪಿದವರು.

ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡ ಕಾರ್ಯನಿಮಿತ್ತ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರು ಡಿಕ್ಕಿ ಹೊಡೆಯಿತು.

ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಉತ್ತಮ ಜನಸ್ನೇಹಿ, ಪರೋಪಕಾರಿ ಗುಣದೊಂದಿಗೆ ಜನಾನುರಾಗಿಯಾಗಿದ್ದ ಅವರು ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕ ದಾಖಲಾಗಿದೆ.





















































 
 
error: Content is protected !!
Scroll to Top