ದಂಪತಿ ಆತ್ಮಹತ್ಯೆ: ಕುಟುಂಬ ಕಲಹದ ಶಂಕೆ

ಮಂಡ್ಯ: ಕುಟುಂಬ ಕಲಹಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ. ಆರ್. ಪೇಟೆ ಪಟ್ಟಣದಲ್ಲಿ ನಡೆದಿದೆ.

ದಂಪತಿ ಆತ್ಮಹತ್ಯೆಗೂ ಮುನ್ನ ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲ್ಲಲು ಪ್ರಯತ್ನ ನಡೆಸಿದ್ದು, ಆದರೆ ಅಸ್ವಸ್ಥಗೊಂಡ ಮಗು ಬದುಕುಳಿದ ಘಟನೆ ನಡೆದಿದೆ.

ಮೃತರನ್ನು ದರ್ಶನ್ ಮತ್ತು ದಿವ್ಯಶ್ರೀ ಎಂದು ಗುರುತಿಸಲಾಗಿದೆ.





















































 
 

ಇವರು ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರ ಬಡಾವಣೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಯಾವುದೋ ಕಾರಣಕ್ಕೆ ದಂಪತಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲ್ಲಲು ಯತ್ನಿಸಿ, ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಬದುಕುಳಿದಿದೆ.

ಆತ್ಮಹತ್ಯೆಗೆ ಸರಿಯಾದ ಕಾರಣ ಏನು? ಎನ್ನುವುದು ತಿಳಿದು ಬಂದಿಲ್ಲ.

error: Content is protected !!
Scroll to Top