ಮನೆಯ ಶೆಡ್ನಲ್ಲಿ ಬ್ಯಾರಲ್ಗಳಲ್ಲಿ ಅಪಾಯಕಾರಿಯಾಗಿ ತುಂಬಿಸಿಟ್ಟಿದ್ದ ಡೀಸೆಲ್
ಉಪ್ಪಿನಂಗಡಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಇಂಧನ ಅಭಾವದ ಭೀತಿ ತಲೆದೋರಿರುವಂತೆಯೇ ಉಪ್ಪಿನಂಗಡಿಯಲ್ಲಿ 4 ಸಾವಿರ ಲೀಟರ್ಗೂ ಅಧಿಕ ಡೀಸೆಲ್ ಅಕ್ರಮವಾಗಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಅಕ್ರಮವಾಗಿ ಶೇಖರಿಸಿದ್ದ ಸುಮಾರು 4,175 ಲೀಟರ್ ಡೀಸೆಲ್ನ್ನು ಪೊಲೀಸರು ಪತ್ತೆಹಚ್ಚಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಾರ್ಚ್ 9ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ.ಕೆ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲ್ ಅನ್ನು ಬ್ಯಾರೆಲ್ ಹಾಗೂ ಕ್ಯಾನ್ಗಳಲ್ಲಿ ಸಂಗ್ರಹಿಸಿಟ್ಟಿರುವುದಾಗಿ ತಿಳಿದುಬಂದಿತ್ತು.
ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ವೃತ್ತ ನಿರೀಕ್ಷಕ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿಗಳೊಂದಿಗೆ ಪೊಲೀಸರು ಸ್ಥಳಕ್ಕೆ ತೆರಳಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ನ್ನು ಪರಿಶೀಲನೆ ನಡೆಸಿದರು. ಈ ವೇಳೆ ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರಲ್ಗಳು ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 5 ಕ್ಯಾನ್ಗಳಲ್ಲಿ ಒಟ್ಟು 4,175 ಲೀಟರ್ ಡೀಸೆಲ್ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.
ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರಲ್ಗಳು, ಖಾಲಿ ಕ್ಯಾನ್ಗಳು ಹಾಗೂ ಇತರ ವಸ್ತುಗಳು ಕೂಡ ಪತ್ತೆಯಾಗಿವೆ. ವಶಪಡಿಸಿಕೊಂಡ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,50,000 ರೂ. ಎಂದು ತಿಳಿದುಬಂದಿದೆ. ಆರೋಪಿ ಜಗದೀಶ್ನನ್ನು ವಿಚಾರಿಸಿದಾಗ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದೆ ಅಕ್ರಮವಾಗಿ ಡೀಸೆಲ್ ಸಂಗ್ರಹಿಸಿಟ್ಟಿರುವುದು ತಿಳಿದುಬಂದಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 35/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 287 ಹಾಗೂ 3(5), ಅಗತ್ಯ ವಸ್ತುಗಳ ಕಾಯ್ದೆ 1955ರ ಕಲಂ 3 ಮತ್ತು 7, ಹಾಗೂ ಪೆಟ್ರೋಲಿಯಂ ಕಾಯ್ದೆ 1934ರ ಕಲಂ 23 ಅನ್ವಯ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
























