ಸುಳ್ಯ: ನಿನ್ನೆ ರಾತ್ರಿ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ. ಕಾರಿಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಕಾರು ಮಾವಿನಕಟ್ಟೆಯಿಂದ ಸುಳ್ಯದತ್ತ ಬರುತ್ತಿರುವ ಸಮಯದಲ್ಲಿ ಈ ದುರಂತ ಸಂಭವಿಸಿದೆ.

























