ಸಿದ್ಧಾಪುರ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟ ಘಟನೆ ಹೈಸ್ಕೂಲ್ ಪೈಸಾರಿ ಎಂಬಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಚೌರಿರ ಗಣಪತಿ(49) ಎಂದು ಗುರುತಿಸಲಾಗಿದೆ.
ಗುರುವಾರ ಹಾಡು ಹಗಲೇ ಕಾಡಾನೆ ದಾಳಿ ನಡೆದಿದೆ. ಅವರು ಕಾರ್ಮಿಕರ ಜೊತೆಗೆ ತಮ್ಮ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಾನೆ ದಾಳಿ ಅರಣ್ಯ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

























