ವಿಟ್ಲ: ಬಾಡಿಗೆ ಮನೆಯಲ್ಲಿ ಡ್ರಗ್ಸ್‌ ದಂಧೆ, ನಾಲ್ವರು ಸೆರೆ

ವಿಟ್ಲ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಇದ್ದುಕೊಂಡು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತ ತನ್ನ ಮನೆಯಲ್ಲಿ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರತ್ನಕುಮಾರ್ ಎಂ. ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದರು.

ಈ ವೇಳೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ಅಶ್ರಫ್ ಜಿ (38) ವಾಸವಿದ್ದ ಮನೆಯನ್ನು ಪರಿಶೀಲಿಸಿದಾಗ, ಅಶ್ರಫ್ ಜಿ ಜೊತೆಗೆ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಹಾಗೂ ಅಶ್ರಫ್ ಎನ್.ಎ. ಎಂಬವರು ಇದ್ದರು.























































 
 

ಮನೆಯ ಪರಿಶೀಲನೆಯ ವೇಳೆ ಒಟ್ಟು 17.97 ಗ್ರಾಂ ತೂಕದ ಸುಮಾರು ರೂ.1,79,700 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಚೂರಿ ಹಾಗೂ ಇತರ ವಸ್ತುಗಳು ಪತ್ತೆಯಾಗಿದ್ದು, ಪೊಲೀಸರು ಅವುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 61/2026ರಡಿ ಎನ್ಡಿಪಿಎಸ್ ಕಾಯ್ದೆ 1985ರ ಕಲಂ 8(C), 22(C) ಹಾಗೂ ಆರ್ಮ್ಸ್ ಕಾಯ್ದೆಯ ಕಲಂ 27ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top