ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಅಬುಬ್ಬಕ್ಕರ್‌ನಿಗೆ ‌ಶಿಕ್ಷೆ ಪ್ರಕಟ

ಮಂಗಳೂರು: ಅಪ್ರಾಪ್ತ ವಯಸ್ಸಿನ ಹುಡುಗಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಅಬುಬ್ಬಕರ್ (53) ಎಂಬಾತನಿಗೆ ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.

ತನ್ನ ನೆರೆಮನೆಯ ಬಾಲಕಿಯನ್ನು ಅಬುಬ್ಬಕ್ಕರ್ ಕಳೆದ 2025 ರ ಮಾರ್ಚ್ 29 ರಂದು ಆಕೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಎಳೆದೊಯ್ದು, ಯಾರೂ ವಾಸವಿಲ್ಲದ ‌ಮನೆಯ ಸಮೀಪ ಅತ್ಯಾಚಾರ ಮಾಡಿದ್ದ. ಅದಕ್ಕೂ ಮೊದಲು ಸಹ ಆತ ಮೂರು ಬಾರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈತನ ಬಗ್ಗೆ ವಿಚಾರಣೆ ನಡೆಸಲಾಗಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ಅಬುಬ್ಬಕ್ಕರನಿಗೆ 20 ವರ್ಷಗಳ ಕಠಿಣ ಸಂಜೆ ಮತ್ತು 45 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ 4 ತಿಂಗಳ ಸಾದಾ ಸಜೆ ವಿಧಿಸಿ ಆದೇಶ ನೀಡಿದ್ದಾರೆ.























































 
 

ಬಿಎನ್‌ಎಸ್ ಕಲಂ 351(2) ನಡಿ 3 ತಿಂಗಳ ಸಾದಾ ಸಜೆ ಮತ್ತು 5,000 ರೂ.ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 15 ದಿನ ಸಾದಾ ಸಜೆ ವಿಧಿಸಿ ತೀರ್ಪು ನೀಡಿದೆ. ಸಂತ್ರಸ್ತೆಗೆ ದಂಡದ ಮೊತ್ತ 50,000 ರೂ. ಹಾಗೂ ಪ್ರತ್ಯೇಕವಾಗಿ 3.50 ಲಕ್ಷ ರೂ. ಪರಿಹಾರವಾಗಿ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೋಕ್ಸೋ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ಬೆಂಗಳೂರು ವಾದ ಮಂಡಿಸಿದ್ದರು.

error: Content is protected !!
Scroll to Top