ಸುಳ್ಯ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೈಸೂರಿನ ಕೆ. ಆರ್. ನಗರದ ಬೇರ್ಯ ನಿವಾಸಿ ಮಂಜು (42) ಎಂಬವರೇ ಮೃತ ದುರ್ದೈವಿ. ಗುರುವಾರ ತರಗತಿ ಮುಗಿಸಿದ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಹೀಗಾಗಿ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆದಿದ್ದರು. ಬಳಿಕ ಸ್ಥಳೀಯ ಮೆಡಿಕಲ್ಗೆ ಔಷಧ ಖರೀದಿಗೆ ಹೋಗಿದ್ದರು. ಅಲ್ಲಿ ಇದ್ದಕ್ಕಿದ್ದ ಹಾಗೆ ಅವರು ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಹೃದಯ ಸ್ತಂಭನ ಮರಣಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

























