ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

ಶಿರ್ವ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಂಕರಪುರದ ಸಾಲ್ಮರದ ಕ್ಯಾಟರಿಂಗ್ ಶೆಡ್ ಸಮೀಪ ನಡೆದಿದೆ.

ಮೃತನನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ.

ಕ್ಯಾಟರಿಂಗ್ ಶೆಡ್ ಬಳಿಯ ರೂಮ್‌ನಲ್ಲಿ ಗೌತಮ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾದಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಆದರೂ ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

























































 
 

ಗೌತಮ್ ಬೈಂದೂರು ಮೂಲದವರಾಗಿದ್ದು, ಅವಿವಾಹಿತರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ವಿವಿಧ ಸಂಘ ಸಂಸ್ಥೆಗಳಲ್ಲಿಯೂ ‌ಸಕ್ರಿಯವಾಗಿ ಭಾಗಿಯಾಗುತ್ತಿದ್ದರು.

ಶಿರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top