ಮಂಗಳೂರು: ಸುರತ್ಕಲ್‌ನ ಹೊಸಬೆಟ್ಟು ಪರಿಸರದ ಗ್ಯಾರೇಜ್‌ನಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವು ಗೈದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂಲತಃ ರಾಜಸ್ಥಾನದ ಜೋದ್‌ಪುರ ನಿವಾಸಿ ಸದ್ಯ ಬೆಂಗಳೂರಿನ ಬನಶಂಕರಿ ಶ್ರೀನಿವಾಸ ನಗರದಲ್ಲಿ ವಾಸವಾಗಿರುವ ಮುಖೇಶ್ ದಾಸ್ (46) ಬಂಧಿತ ಆರೋಪಿ.
ಆರೋಪಿಯ ಬಳಿಯಿದ್ದ 96 ಸಾವಿರ ರೂ. ಮೌಲ್ಯದ ವಾಹನಗಳ ಬಿಡಿಭಾಗಗಳು, ಕೃತ್ಯಕ್ಕೆ ಬಳಸಿದ್ದ 15 ಲಕ್ಷ ರೂ.ಮೌಲ್ಯದ ಈಚರ್ ಲಾರಿ ಸೇರಿದಂತೆ 15.96 ಲಕ್ಷ ರೂ.ಲಕ್ಷ ರೂ.ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

























