ಗೃಹ ಬಳಕೆ ಸಿಲಿಂಡರ್ ಸಮಸ್ಯೆಯಿ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್ಗಳ ದಾಸ್ತಾನು ಇದ್ದು, ಜಿಲ್ಲೆಯ ಎಲ್ಲ ಗೃಹ ಬಳಕೆ ಅನಿಲ ಗ್ರಾಹಕರು ಗಾಬರಿ/ ಆತಂಕಪಡಬಾರದೆಂದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರ್ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆ ಇದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗೃಹ ಬಳಕೆ ಅನಿಲ ಗ್ರಾಹಕರು ಸಹಾಯವಾಣಿ ಸಂಖ್ಯೆ 0824-2423622 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.


























