SSLC ಪರೀಕ್ಷಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ಬೆಂಗಳೂರು: ಮಾ. 18 ರಿಂದ ರಾಜ್ಯದಲ್ಲಿ ಹತ್ತನೇ ತರಗತಿ ಪರೀಕ್ಷೆ ಆರಂಭವಾಗಲಿದ್ದು, ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 88 2025-26 2 ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್/ ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ -1 ನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟ‌ರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ ಎಂದು ಹೇಳಿದ್ದಾರೆ.

























































 
 

error: Content is protected !!
Scroll to Top