ರಿಕ್ಷಾದಲ್ಲಿ ಕುಳಿತು ಮಹಿಳೆ ಮೇಲೆ ಮೂತ್ರ ಮಾಡಿದ ಯುವಕ : ಥಳಿಸಿ ಕೊಂದ ಜನ

ಕುಡಿದ ಅಮಲಿನಲ್ಲಿ ಮಾಡಬಾರದ ಕೃತ್ಯ ಎಸಗಿದ ಯುವಕ

ಚೆನ್ನೈ: ಕುಡಿದ ಮತ್ತಲ್ಲಿ ಆಟೋದಲ್ಲಿ ಕುಳಿತು ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕನ್ನು ಜನರು ಥಳಿಸಿ ಕೊಂದ ಘಟನೆ ಘಟನೆ ಚೆನ್ನೈಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು 30 ವರ್ಷದ ಕಲೈಸೆಲ್ವನ್ ಎಂದು ಗುರುತಿಸಲಾಗಿದ್ದು, ಸ್ನೇಹಿತನೊಂದಿಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಎಂದು ತಿಳಿದುಬಂದಿದೆ.

ಬುಧವಾರ ಕಲೈಸೆಲ್ವನ್ ಕುಡಿದ ಮತ್ತಿನಲ್ಲಿ ಸ್ನೇಹಿತನೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇದರಿಂದ ಕಲೈಸೆಲ್ವನ್ ಹಾಗೂ ಮಹಿಳೆಯ ನಡುವೆ ವಾಗ್ವಾದ ಉಂಟಾಗಿದ್ದು, ಆಗ ಗುಂಪು ಸೇರಿದ ಜನರು ಕಲೈಸೆಲ್ವನ್ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಆತನ ಪ್ರಜ್ಞೆ ತಪ್ಪಿದೆ. ಕೂಡಲೇ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ವೈದ್ಯರು ಸಾವನ್ನಪ್ಪಿರುವುದಾಗಿ ದೃಢಪಡಿಸಿದರು.

























































 
 

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಲ್ಲೆ ನಡೆಸಿದ ವ್ಯಕ್ತಿ ಗುರುತಿಸಲು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!
Scroll to Top