ಕಟಪಾಡಿ: ಗ್ಯಾಸ್ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆ ಕಟಪಾಡಿ ಸಮೀಪ ನ್ಯಾಷನಲ್ ಹೈವೇ 66 ರಲ್ಲಿ ನಡೆದಿದೆ.
ಕಟಪಾಡಿ ಜಂಕ್ಷನ್ ಸಮೀಪ ನಡೆದಿರುವ ಈ ಘಟನೆಯಿಂದ ಸಾರ್ವಜನಿಕರಲ್ಲಿ ಗ್ಯಾಸ್ ಸೋರಿಕೆಯ ಭೀತಿ ಎದುರಾಗಿದೆ. ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನೆಯ ಕಾರಣಕ್ಕೆ ಹೆದ್ದಾರಿಯಲ್ಲಿ ವಾಹನಗಳು ಸಹ ಸಾಲುಗಟ್ಟಿ ನಿಂತಿವೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಕಾಪು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.


























