ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ

ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಗೆ ತರಬೇತಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿ ನಡೆದ ಚರ್ಚೆಯಲ್ಲಿ, ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಅವರು, ಗ್ರಾಮೀಣ ಬಡ ವಿದ್ಯಾರ್ಥಿಗಳು ನೀಟ್ ವ್ಯವಸ್ಥೆಯಿಂದ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿತ್ತು. ದುಬಾರಿ ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಸಾಮರ್ಥ್ಯ ಇಲ್ಲದಿರುವುದು ಪ್ರಮುಖ ಸಮಸ್ಯೆ ಎಂಬುದಾಗಿ ಸರ್ಕಾರದ ಗಮನಕ್ಕೆ ತಂದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನೀಟ್ ಕಾರಣದಿಂದ ರಾಜ್ಯದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ ಕಡಿಮೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಪರೀಕ್ಷಾ ವ್ಯವಸ್ಥೆ ಮುಂದುವರಿದರೂ, ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗಲು ಸರ್ಕಾರ ಕ್ರಮಗಳನ್ನು ರೂಪಿಸುತ್ತಿದೆ ಎಂದಿದ್ದಾರೆ.



























































 
 

ಹಾಗೆಯೇ, ನೀಟ್ ರದ್ದುಗೊಳಿಸುವ ಯತ್ನಗಳಿದ್ದರೂ, ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಅದು ಜಾರಿಯಲ್ಲೇ ಮುಂದುವರಿದಿದೆ. ಈ ಹಿನ್ನೆಲೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ಒದಗಿಸುವ ಮೂಲಕ ಅವಕಾಶಗಳನ್ನು ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

error: Content is protected !!
Scroll to Top