ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಬೆಂಕಿ ಅವಘಡ

ನವದೆಹಲಿ: ಕಟ್ಟಡವೊಂದರಲ್ಲಿ ಬೆಂಕಿ ಹತ್ತಿಕೊಂಡು ಒಂಬತ್ತು ಜನರು ಸಜೀವ ಸುಟ್ಟು ಹೋದ ಘಟನೆ ನೈಋತ್ಯ ದೆಹಲಿಯ ಪಾಲಂ ಎಂಬಲ್ಲಿ ನಡೆದಿದೆ.

ಇಂದು ಬೆಳಗ್ಗೆ ಅಪಾರ್ಟ್‌ಮೆಂಟ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಏಕಾಏಕಿ ಈ ದುರಂತ ಸಂಭವಿಸಿರುವುದಾಗಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದೆ. ಸುಮಾರು 30 ಅಗ್ನಿಶಾಮಕ ವಾಹನಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ. ಕಟ್ಟಡದ ಒಳಗೆ ಜನರು ಸಿಲುಕಿರುವ ಶಂಕೆಯೂ ವ್ಯಕ್ತವಾಗಿದೆ.



























































 
 

error: Content is protected !!
Scroll to Top