ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಮೂಡಬಿದ್ರೆ ಪೊಲೀಸರು ದಾಳಿ ಮಾಡಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಮುಗಿದ ಬಳಿಕ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು.

ಈ ಕುರಿತು ಮಾಹಿತಿ ಪಡೆದ ಮೂಡುಬಿದ್ರೆ ಪೊಲೀಸರು ತಕ್ಷಣ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಕೋಳಿ ಅಂಕಕ್ಕೆ ಪಣವಾಗಿಟ್ಟಿದ್ದ ₹1,480 ನಗದು, 17 ಜೀವಂತ ಹುಂಜಗಳು ಹಾಗೂ ಕೋಳಿ ಅಂಕಕ್ಕೆ ಬಳಸುವ ಎರಡು ಬಾಳುಗಳನ್ನು ವಶಪಡಿಸಿಕೊಂಡಿದ್ದಾರೆ.



























































 
 

ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 30/2026 ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 189(2), 193 ಹಾಗೂ 190 ಜೊತೆಗೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87, 93 ಮತ್ತು ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 1960ರ ಕಲಂ 11(1)(ಟಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ.

error: Content is protected !!
Scroll to Top