ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ

ಸುಬ್ರಹ್ಮಣ್ಯ: ಹಾಲಿನ ಡೈರಿಯಿಂದ ಮತ್ತು ದಿನಸಿ ಅಂಗಡಿಯಿಂದ ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಆರೋಪಿಯನ್ನು ಕೇರಳ ಮೂಲದ ಸತೀಶ್ ಎಂದು ಗುರುತಿಸಲಾಗಿದೆ.

ಸತೀಶ್‌ಗೆ ನ್ಯಾಯಾಲಯವು ಕಲಂ 331(4) BNS ಅಡಿಯಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಿದೆ. ಜೊತೆಗೆ ಕಲಂ 305 BNS ಅಡಿಯಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ 10 ದಿನಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ಆದೇಶಿಸಿದೆ.



























































 
 

ಈ ಪ್ರಕರಣದ ತನಿಖೆಯನ್ನು ಪಿ.ಎಸ್.ಐ. ಕಾರ್ತಿಕ್ ಅವರು ನಡೆಸಿ, ಅಗತ್ಯ ಸಾಕ್ಷಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

error: Content is protected !!
Scroll to Top