ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ವಿರುದ್ಧ ಅತ್ಯಾಚಾರ ದೂರು ದಾಖಲು

ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಶಿಕ್ಷಕಿ

ಮಂಗಳೂರು : ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಸಭ್ಯ ವರ್ತನೆಯ ಕಾರಣಕ್ಕೆ ಅಮಾನತುಗೊಂಡಿರುವ ಮೂಡುಬಿದಿರೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ.ವಿರುದ್ಧ ಬೆಳ್ತಂಗಡಿಯ ವೇಣೂರು ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಶಿಕ್ಷಕಿಯೊಬ್ಬರು ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು ಸಂದೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಗಂಡಂದಿರ ಮೇಲೆ ಕೇಸ್ ಹಾಕಿ ಅವರ ಹೆಂಡತಿಯರನ್ನು ಪೀಡಿಸುವ ಗಂಭೀರ ಆರೋಪ ಇನ್‌ಸ್ಪೆಕ್ಟರ್ ಸಂದೇಶ್ ಮೇಲೆ ಕೇಳಿಬಂದಿತ್ತು. ಈ ಕುರಿತು ಕೆಲ ಆಡಿಯೋಗಳು, ವಿಡಿಯೋಗಳು ಭಾರಿ ಸಂಚಲನ ಸೃಷ್ಟಿಸಿದ್ದವು. ಇದರ ಬೆನ್ನಲ್ಲೇ ಸಂದೇಶ್ ಅಮಾನತುಗೊಂಡಿದ್ದರು. ಇದೀಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.























































 
 

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ. ಇನ್‌ಸ್ಪೆಕ್ಟರ್‌ ಸಂದೇಶ್ ವಿರುದ್ಧ ಸಂತ್ರಸ್ತೆ ಶಿಕ್ಷಕಿ ದೂರು ನೀಡಿದ್ದಾರೆ. ಸಂದೇಶ್ ಮೊದಲು ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದರು. ಈ ವೇಳೆ 2018ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಅತ್ಯಾಚಾರ ಮಾಡಿರುವುದಾಗಿ ಸ್ವತಃ ಶಿಕ್ಷಕಿ ದೂರು ನೀಡಿದ್ದಾರೆ. ಬೆಳ್ತಗಂಡಿ ಸರ್ಕಲ್ ವ್ಯಾಪ್ತಿಯಲ್ಲಿ ಬರುವ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಲವು ಕಾರಣಗಳನ್ನು ಹಿಡಿದು, ಕೆಲ ಪ್ರಕರಣಗಳ ಕುರಿತು ಬೆದರಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. 2018ರಿಂದ 2023ರವರೆಗೆ ಸತತ 5 ವರ್ಷಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಜೀವ ಭಯ, ಮಾನ, ಕುಟುಂಬಸ್ಥರ ವಿರುದ್ಧವೂ ಬೆದರಿಕೆ ಹಾಕಿದ್ದ ಕಾರಣ ಮೌನವಾಗಿದ್ದೆ ಎಂದು ಶಿಕ್ಷಕಿ ದೂರಿನಲ್ಲಿ ಹೇಳಿದ್ದಾರೆ. ಬಿಎನ್‌ಎಸ್ 376(2)(A)(1), 376(2)(n), 384, 506 ಅಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿದ ಆರೋಪ ಸಂದೇಶ್ ಮೇಲಿದೆ. ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಆರೋಪ ಬಾರಿ ಚರ್ಚೆಯಾಗಿತ್ತು. ಆದರೆ ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಇದು ಪ್ರಚೋದಿತ ಹಾಗೂ ಸುಳ್ಳು ಆರೋಪ ಎಂದು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಶಿಕ್ಷಕಿಯೊಬ್ಬರು ದೂರು ನೀಡಿದ್ದು ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇಬ್ಬರು ಮಹಿಳೆಯರ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪೂರಕವಾಗಿ ಆಡಿಯೋ ಹಾಗೂ ವಿಡಿಯೋ ವೈರಲ್ ಆಗಿತ್ತು. ಆಡಿಯೋದಲ್ಲಿ ಅರೆಸ್ಟ್ ಆಗಿರುವ ಗಂಡನ ಬಿಡುಗಡೆ ಮಾಡಲು 25 ಲಕ್ಷ ರೂಪಾಯಿ ನೀಡುವಂತೆ ಬೆದರಿಸಿದ್ದಾರೆ. ಇಲ್ಲದಿದ್ದರೆ ತನ್ನ ಜೊತೆ ಮಲಗುವಂತೆ ಬೆದರಿಸಿದ ಆಡಿಯೋ ಭಾರಿ ಕೋಲಾಹಲ ಸೃಷ್ಟಿಸಿತ್ತು. ಆದರೆ ಈ ಪ್ರಕರಣ ಸಂಬಂಧ ಪೊಲೀಸ್ ಪ್ರಾಥಮಿಕ ತನಿಖೆಗಳು ಹೊಸ ವರದಿ ನೀಡಿತ್ತು. ಮಹಿಳೆಯ ಆರೋಪದಲ್ಲಿ ಹುರುಳಿಲ್ಲ ಎಂದಿತ್ತು. ದುರ್ವರ್ತನೆಯ ಹಿನ್ನೆಲೆಯಲ್ಲಿ ಸಂದೇಶ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಹೇಳಿದ್ದರು.

error: Content is protected !!
Scroll to Top