ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತೆಯಾಗಿರುವ ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರು ಇತ್ತೀಚೆಗೆ ಕೃಷಿ ವಿಸ್ತರಣಾ ಸೇವೆಯ ಡಿಪ್ಲೊಮಾ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ.

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ಕೃಷಿ ವಿಜ್ಞಾನ ಕೇಂದ್ರ (ದ.ಕ.) ಮಂಗಳೂರು ಸಮೇತಿ (ದಕ್ಷಿಣ) ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆ ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ ಹೈದರಾಬಾದ್ ಮತ್ತು ಕೃಷಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ 2023-2024ನೇ ಸಾಲಿನ ಈ ಪರೀಕ್ಷೆಯಲ್ಲಿ ಲೇಖಲತಾ ಅವರುಈ ಸಾಧನೆ ಮಾಡಿದ್ದಾರೆ.
ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತೆಯಾಗಿರುವ ಶ್ರೀಮತಿ ಲೇಖಲತಾ ಅವರ ಪತಿ ದಿನೇಶ್ ಮೆದು ಅವರು ಸಹಕಾರ, ಧಾರ್ಮಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದು ಈ ದಂಪತಿಗಳ ಮೂರು ಮಕ್ಕಳಾದ ಜನನಿ 9ನೆ ತರಗತಿ, ಚಿನ್ಮಯಿ 6ನೆ ತರಗತಿ ಮತ್ತು ಚರಿತ UKG ತರಗತಿಗಳಲ್ಲಿ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವ್ಯಾಸಂಗ ನಿರತರಾಗಿದ್ದಾರೆ.

























