ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಟಿಕೆಟ್‌ ಸಿಗದಿರುವುದರಿಂದ ಭುಗಿಲೆದ್ದ ಅಲ್ಪಸಂಖ್ಯಾತರ ಆಕ್ರೋಶ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ನಿರಾಶರಾಗಿರುವ ಮುಸ್ಲಿಮ್‌ ಸಮುದಾಯದವರು ಈಗ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. 20ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಮತ್ತು ಯುವನಾಯಕರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸುವುದಾಗಿ ಪಣ ತೊಟ್ಟಿದ್ದಾರೆ.























































 
 

ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಇಂದು ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

ದಾವಣಗೆರೆ ದಕ್ಷಿಣ ಶಾಮನೂರು ಕುಟುಂಬದ ಸಾಮ್ರಾಜ್ಯ ಎಂಬ ಮಾತಿದೆ. ಇದೇ ನಂಬಿಕೆಯ ಮೇಲೆ ಹೈಕಮಾಂಡ್ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಅವರಿಗೆ ಟಿಕೆಟ್‌ ನೀಡಿದೆ. ಆದರೆ, ಈ ನಿರ್ಧಾರ ಈಗ ಕೈ ಪಾಳಯದಲ್ಲಿ ಬೆಂಕಿ ಹಚ್ಚಿದೆ. ಕ್ಷೇತ್ರದಲ್ಲಿ ನಿರ್ಣಾಯಕ ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತ ಮತದಾರರನ್ನು ಹೈಕಮಾಂಡ್ ನಿರ್ಲಕ್ಷಿಸಿದೆ ಎಂಬುದು ಮುಸ್ಲಿಂ ಮುಖಂಡರ ನೇರ ಆರೋಪ.

ನಮ್ಮನ್ನ ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ತೀರಿ, ಅಧಿಕಾರ ಕೊಡಲ್ಲ ಎಂದು ಮುಖಂಡರು ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಅಸಮಾಧಾನ ಕೇವಲ ಮಾತಿಗೆ ಸೀಮಿತವಾಗಿಲ್ಲ. ಹತ್ತಾರು ಮುಸ್ಲಿಂ ಮುಖಂಡರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಬೆಂಬಲಿತ ಪಡೆಯೂ ಈ ಬಂಡಾಯದಲ್ಲಿ ಒಳಗೊಳಗೆ ಕೈಜೋಡಿಸಿದೆ ಎನ್ನಲಾಗಿದೆ. ಕಾಂಗ್ರೆಸ್ ಮುಖಂಡ ಸಾಧಿಕ್ ಪೈಲ್ವಾನ್ ಈ ಬಾರಿ ಪ್ರಬಲವಾಗಿ ನಿಂತಿದ್ದು, ನಮ್ಮ ಸಮುದಾಯಕ್ಕೆ ಗೌರವ ಸಿಗದ ಕಡೆ ನಾವೇಕೆ ಇರಬೇಕು ಎಂದು ಪ್ರಶ್ನಿಸಿದ್ದಾರೆ. ಇದರಿಂದ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆಯಿದೆ.

error: Content is protected !!
Scroll to Top