ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಶ್ರಫ್ ಬಂಧನ

ಬಂಟ್ವಾಳ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ‌ವಾರಂಟ್ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬಂಧಿತನನ್ನು ‌ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತ ಅ.ಕ್ರ :117/2019 ಹಾಗೂ ಅ.ಕ್ರ :111/2020 ಪ್ರಕರಣಗಳಿಗೆ ಸಂಬಂಧಿಸಿದಂತೆ, ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಲವು ಬಾರಿ ಹಾಜರಾಗದೇ ತಪ್ಪಿಸಿಕೊಂಡಿದ್ದ. ಈತನ ವಿರುದ್ಧ ಹತ್ತಕ್ಕೂ ಹೆಚ್ಚು ಬಾರಿ ವಾರಂಟ್ ಸಹ ಜಾರಿಯಾಗಿತ್ತು.

ಸದ್ಯ ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಹಾಗೂ CHC 665 ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.























































 
 
error: Content is protected !!
Scroll to Top