ಬೆಳ್ತಂಗಡಿ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯೊಬ್ಬನನ್ನು ಕೊನೆಗೂ ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಣಿಕಂಠ ಎಂದು ಗುರುತಿಸಲಾಗಿದೆ. ಈತ ಉಡುಪಿ ಜಿಲ್ಲೆಯ ಕಾಪು ಪ್ರದೇಶದವನು ಎಂದು ತಿಳಿದು ಬಂದಿದೆ.
ಆರೋಪಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದ್ದು, ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

























