ನವದೆಹಲಿ: 92,600 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಹರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದ್ದು, ಇನ್ನೆರಡು ದಿನದಲ್ಲಿ ನವಮಂಗಳೂರು ಬಂದರಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಯುನೈಟೆಟ್ ಅರಬ್ ಎಮಿರೇಟ್ಸ್‌ನ (ಯುಎಇ) ರುವೈಸ್‌ನಿಂದ 45 ಸಾವಿರ ಮೆಟ್ರಿಕ್ ಎಲ್‌ಪಿಜಿ ಹೊತ್ತ ಫೈನ್‌ಗ್ಯಾಸ್ ಹಡಗು ಇದೇ 27 ರಂದು ನವಮಂಗಳೂರು ಬಂದರಿಗೆ ಆಗಮಿಸಲಿದೆ ಎಂದು ಬಂದರುಗಳು, ಹಡಗು ಸಾಗಾಣೆ ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ ಮಾಹಿತಿ ನೀಡಿದ್ದಾರೆ.
ಇನ್ನೊಂದು ಹಡಗು ಜಗ್‌ಸಂತ್ ಇದೇ 26 ರಂದು ಗುಜರಾತ್ ಕಾಂಡ್ಲಾ ಬಂದರಿಗೆ ಆಗಮಿಸಲಿದೆ.

























