ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಪುತ್ತೂರು ಘಟಕದ ಸಭೆ ಸ್ವಾಗತ ಹೋಟೆಲ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ ಪುತ್ತೂರು ಆನಂದಾಶ್ರಮಕ್ಕೆ ಭೇಟಿ, ಜಿಲ್ಲಾ ಸಂಚಾಲಕರ ಭಾಸ್ಕರ್ ಬಾರ್ಯ ಅಗಸ್ತ್ಯ ಅವರ ಮನೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆಯಲ್ಲಿ ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವುದು, ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಪ್ರಶಸ್ತಿ ಸಮಾರಂಭ, ಎಪ್ರಿಲ್ 14ರಂದು ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಲಿರುವ ಶ್ರೀ ಮಹಾವಿಷ್ಣು ಯಾಗದಲ್ಲಿ ಭಾಗವಹಿಸುವ ಬಗ್ಗೆ ಚರ್ಚಿಸಲಾಯಿತು.
ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ ಅಧ್ಯಕ್ಷತೆ ವಹಿಸಿದ್ದರು.
ಭಾಸ್ಕರ ಬಾರ್ಯ, ಲೋಕೇಶ್ ಹೆಗ್ಡೆ ಪುತ್ತೂರು, ಪದ್ಮನಾಭ ನಾಯಕ್, ಚಂಚಲಾಕ್ಷಿ, ಈಶ್ವರ ಭಟ್ ಗುಂಡ್ಯಡ್ಕ, ಮಾಧವ ಎಂ. ಪುತ್ತೂರು ಭಾಗವಹಿಸಿದ್ದರು.
ಭವಾನಿ ಶಂಕರ ಶೆಟ್ಟಿ ಪುತ್ತೂರು ಸ್ವಾಗತಿಸಿ, ಶಂಕರಿ ಶರ್ಮ ವಂದಿಸಿದರು.

























