48 ಕೆಜಿ ಡ್ರಗ್ಸ್‌ ವಶ : ಇಬ್ಬರು ಆರೋಪಿಗಳ ಬಂಧನ

ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹಣೆ ನಡೆಸಲಾಗುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಾಸನಪುರ ಗ್ರಾಮದ ಪಕ್ಕದ ಆಸ್ಪತ್ರೆ ಕಾವಲ್‌ನಲ್ಲಿ ಇದ್ದ ಒಂಟಿ ಮನೆಯಲ್ಲಿ ಈ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಹುಣಸೂರು ಟೌನ್ ರೆಹಮತ್ ಮೊಹಲ್ಲಾ ನಿವಾಸಿಯ ಶೆಡ್‌ನಲ್ಲಿ ಕಚ್ಚಾವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ಪೊಲೀಅರು ತಿಳಿಸಿದ್ದಾರೆ.

7.35 ಕೆ.ಜಿ ಮೆಫೆಡ್ರೋನ್ ಮತ್ತು 41 ಕೆ.ಜಿ ಡ್ರಗ್ಸ್ ಪ್ರಿಕರ್ಸರ್ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು 48 ಕೆ.ಜಿ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಈ ರೀತಿಯಾಗಿ ಸಿಂಥೆಟಿಕ್ ಡ್ರಗ್ಸ್ ತಯಾರಣೆ ಮತ್ತು ವಿತರಣೆ ಮಾಡುತ್ತಿದ್ದಂತೆ ಪೊಲೀಸರು ವರದಿ ನೀಡಿದ್ದಾರೆ. ಪ್ರಕರಣವನ್ನು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.























































 
 
error: Content is protected !!
Scroll to Top