ಮೂರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ

ವಿಜಯನಗರ: ಮೂವರು ಮಕ್ಕಳ ಜೊತೆಗೆ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂಡಿ ತಾಲೂಕಿನ ಮಿರಗಿಯಲ್ಲಿ ‌ನಡೆದಿದೆ.

ಮೃತರನ್ನು ‌ರಾಜಶ್ರೀ ಶಂಕ್ರಪ್ಪ ಹಳ್ಳೂರ, ಮಕ್ಕಳಾದ ಅನುಶ್ರೀ, ತನು ಮತ್ತು ಸಂತೋಷ್ ಎಂದು ಗುರುತಿಸಲಾಗಿದೆ.

ಮೃತ ಮಹಿಳೆಯ ಪತಿ ಶಂಕ್ರಪ್ಪ ಖಾಸಗಿ ಬಸ್ಸಿನ ಡ್ರೈವರ್ ಆಗಿದ್ದು, ಘಟನೆ ನಡೆದ ವೇಳೆ ಅವರು ಊರಿನಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ರಾಜಶ್ರೀ ಅವರು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವುದಾಗಿದೆ. ಸಾವಿನ ಕಾರಣ ಇನ್ನೂ ತಿಳಿದು ಬಂದಿಲ್ಲ.























































 
 

ಕುಟುಂಬಸ್ಥರ ಸಮ್ಮುಖದಲ್ಲಿ ಪೊಲೀಸರು ಬಾವಿಯಿಂದ ಮೃತ ದೇಹಗಳನ್ನು ಹೊರತೆಗೆಸಿ ಪೋಸ್ಟ್ ಮಾರ್ಟಂ‌ಗೆ ಕಳುಹಿಸಿದ್ದಾರೆ. ತನ್ನ ಮಕ್ಕಳ ಸಾವಿಗೆ ಪತ್ನಿ ರಾಜಶ್ರೀಯೇ ನೇರ ಕಾರಣ ಎಂದು ಪತಿ ಶಂಕ್ರಪ್ಪ ಆರೋಪಿಸಿದ್ದಾರೆ. ಗ್ರಾಮಸ್ಥರ ಪ್ರಕಾರ ಕುಟುಂಬ ಸದಸ್ಯರ ನಡುವೆ ಆಸ್ತಿಗಾಗಿ ಕಲಹ ನಡೆಯುತ್ತಿದ್ದು, ಇದೇ ಕಾರಣಕ್ಕೆ ರಾಜಶ್ರೀ ಅವರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಹೇಳಲಾಗುತ್ತಿದೆ.

error: Content is protected !!
Scroll to Top