ಶಿವಮೊಗ್ಗ: ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಹತ್ತನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ರಿಪ್ಪನ್ ಪೇಟೆಯ ಬರುವೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಎಂದು ಗುರುತಿಸಲಾಗಿದೆ.
ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಬಾಲಕ ಆನಂತರ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
ರಿಪ್ಪನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

























