ನೇಪಾಲದ ಮಾಜಿ ಪ್ರಧಾನಮಂತ್ರಿ, ಗೃಹ ಸಚಿವ ಬೆಳ್ಳಂಬೆಳಗ್ಗೆ ಅರೆಸ್ಟ್‌

ಹೊಸ ಸರ್ಕಾರ ಬಂದ ಮರುದಿನವೇ ಮಾಜಿಗಳ ವಿರುದ್ಧ ಕ್ರಮ

ಕಠ್ಮಂಡು: ನೇಪಾಳದ ಪ್ರಧಾನಮಂತ್ರಿಯಾಗಿ ಬಾಲೇಂದ್ರ ಶಾ ನೂತನ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಿದ ಮರುದಿನವೇ ಕಳೆದ ವರ್ಷ ನೇಪಾಳದಾದ್ಯಂತ ನಡೆದಿದ್ದ ಜನರೇಷನ್ ಝಡ್‌ (ಝೆನ್ ಜಿ) ಪ್ರತಿಭಟನೆಯನ್ನು ಹತ್ತಿಕ್ಕಿದ ಆರೋಪದಲ್ಲಿ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಬಂಧಿಸಲಾಗಿದೆ.

ಕಳೆದ ವರ್ಷ ನಡೆದಿದ್ದ ಝೆನ್ ಜಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಓಲಿ ಹಾಗೂ ಲೇಖಕ್‌ ಅವರನ್ನು ರುವುದು ಜಗತ್ತಿನಾದ್ಯಂತ ಗಮನ ಸೆಳೆದಿದೆ.























































 
 

ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್‌ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್‌ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ತನಿಖಾ ಆಯೋಗ ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್‌ಸ್ಪೆಕ್ಟರ್ ಜನರಲ್ ಚಂದ್ರ ಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ.

ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹ ಸಚಿವರನ್ನು ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಪೊಲೀಸ್‌ ಓಂ ಅಧಿಕಾರಿ ತಿಳಿಸಿದ್ದಾರೆ.

ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಗೃಹ ಸಚಿವ ಸುಡಾನ್‌ ಗುರುಂಗ್‌, ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ. ಎಂದು ತಿಳಿಸಿದ್ದಾರೆ.

ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್‌ ಲೇಖಕ್‌ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ. ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂಬುದಾಗಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಕ್ರಮ ವಿರೋಧಿಸಿ ಝೆನ್‌ ಜಿಗಳು ಪ್ರತಿಭಟನೆ ನಡೆಸಿದರು. ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟ ತೀವ್ರಗೊಂಡಿತು. ಬಳಿಕ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದರು.

error: Content is protected !!
Scroll to Top