ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ : ಐವರು ಯುವಕರು ಸೆರೆ

ಕ್ರಿಕೆಟ್‌ ಬೆಟ್ಟಿಂಗ್‌ ಜಾಲದಲ್ಲಿ ಶಾಮೀಲಾಗಿರುವ ಶಂಕೆ

ಉಡುಪಿ : ಕಾರ್ಕಳ ಮತ್ತು ಶಿರ್ವದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಪ್ರಕರಣಗಳಡಿ ಐವರನ್ನು ಬಂಧಿಸಲಾಗಿದೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆ ಸಮೀಪದ ಹೋಂಡಾ ಶೋ ರೂಮ್ ಬಳಿ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಪ್ರಸನ್ನ ಎಂ.ಎಸ್. ಮತ್ತು ಅವರ ತಂಡ ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ ಕಪ್ಪು ಕಾರನ್ನು ನಿಲ್ಲಿಸಲು ಪ್ರಯತ್ನಪಟ್ಟರು. ಆದರೆ ಕಾರಿನಲ್ಲಿದ್ದವರು ವಾಹನವನ್ನು ನಿಲ್ಲಿಸುವ ಬದಲು ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.























































 
 

ಶಿರ್ವ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ ಮರಬಾಡ ಅವರ ತಂಡಕ್ಕೆ ಅದೇ ಕಾರು ಸಂಶಯಾಸ್ಪದವಾಗಿ ಬೆಳ್ಮಣ್​ದಿಂದ ಬರುತ್ತಿರುವ ಮಾಹಿತಿ ಲಭ್ಯವಾಗಿತ್ತು. ವಾಹನವನ್ನು ತಡೆದಾಗ ಚಾಲಕ ಮೊದಲು ವೇಗ ಕಡಿಮೆ ಮಾಡಿದರೂ, ಬಳಿಕ ಪೊಲೀಸ್ ಅಧಿಕಾರಿಯನ್ನು ತಳ್ಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ನಂತರ ಶಿರ್ವ ಪಟ್ಟಣದಲ್ಲಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

error: Content is protected !!
Scroll to Top