ಹೋಟೆಲ್‌ಗಳ ಫ್ಯೂಯಲ್ ಸರ್ಚಾರ್ಜ್‌ಗೆ ಬ್ರೇಕ್‌

ಬಿಲ್‌ನಲ್ಲಿ ಎಲ್‌ಪಿಜಿ ಚಾರ್ಜ್ ಸೇರಿಸುವಂತಿಲ್ಲ

ಬೆಂಗಳೂರು : ಬೆಂಗಳೂರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಇತ್ತೀಚೆಗೆ ಗ್ರಾಹಕರಿಗೆ ವಿಧಿಸಲಾಗುತ್ತಿದ್ದ ಎಲ್‌ಪಿಜಿ ಫೀಸ್ ಅಥವಾ ‘ಫ್ಯೂಯಲ್ ಸರ್‌ಚಾರ್ಜ್’ (ಇಂಧನ ಶುಲ್ಕ)ಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಬ್ರೇಕ್ ಹಾಕಿದೆ. ಅಡುಗೆ ಅನಿಲದ ಬಿಕ್ಕಟ್ಟಿನ ನೆಪವೊಡ್ಡಿ ಗ್ರಾಹಕರಿಂದ ಅನಗತ್ಯವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಹೋಟೆಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಬೆಂಗಳೂರಿನ ಹಲವು ಹೋಟೆಲ್‌ಗಳು ಮೆನು ಬೆಲೆ ಮತ್ತು ತೆರಿಗೆಗಳ ಹೊರತಾಗಿ, ‘ಎಲ್‌ಪಿಜಿ ಚಾರ್ಜ್’ ಹೆಸರಿನಲ್ಲಿ ಪ್ರತ್ಯೇಕ ಶುಲ್ಕವನ್ನು ಬಿಲ್‌ನಲ್ಲಿ ಸೇರಿಸುತ್ತಿದ್ದವು. ಈ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಸಿಸಿಪಿಎ, “ಗ್ಯಾಸ್, ಇಂಧನ ಅಥವಾ ವಿದ್ಯುತ್ ವೆಚ್ಚಗಳು ವ್ಯವಹಾರದ ಕಾರ್ಯಾಚರಣೆಯ ಭಾಗವಾಗಿವೆ. ಇವುಗಳನ್ನು ಬಿಲ್‌ನಲ್ಲಿ ಪ್ರತ್ಯೇಕವಾಗಿ ತೋರಿಸಿ ಗ್ರಾಹಕರಿಂದ ವಸೂಲಿ ಮಾಡುವುದು ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಅಡಿಯಲ್ಲಿ ಅನ್ಯಾಯದ ವ್ಯಾಪಾರ ಪದ್ಧತಿ ಎಂದು ಪರಿಗಣಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದೆ.























































 
 

ಬೆಂಗಳೂರು ಹೋಟೆಲ್‌ಗಳ ಸಂಘದ ಜಿ.ಕೆ. ಶೆಟ್ಟಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಬಿಲ್‌ನಲ್ಲಿ ಪ್ರತ್ಯೇಕವಾಗಿ ಎಲ್‌ಪಿಜಿ ಶುಲ್ಕ ವಿಧಿಸುವುದು ಕಾನೂನುಬಾಹಿರ. ಈ ಬಗ್ಗೆ ನಮ್ಮ ಸದಸ್ಯ ಹೋಟೆಲ್‌ಗಳಿಗೆ ಸುತ್ತೋಲೆ ಕಳುಹಿಸುತ್ತೇವೆ. ಅಡುಗೆ ಅನಿಲದ ದರ ಹೆಚ್ಚಳದಿಂದ ನಷ್ಟವಾಗುತ್ತಿದ್ದರೆ, ಹೋಟೆಲ್‌ಗಳು ಮೆನು ಬೆಲೆಯನ್ನು ಶೇ. 5 ರಿಂದ 10 ರಷ್ಟು ಹೆಚ್ಚಿಸಲು ಆಲೋಚಿಸಬಹುದು, ಆದರೆ ಪ್ರತ್ಯೇಕವಾಗಿ ಶುಲ್ಕ ವಿಧಿಸುವುದನ್ನು ನಾವು ಬೆಂಬಲಿಸುವುದಿಲ್ಲ” ಎಂದು ತಿಳಿಸಿದ್ದಾರೆ.

error: Content is protected !!
Scroll to Top