ಶಿವಮೊಗ್ಗ : ಲಾರಿಗೆ ಬೈಕ್ ಡಿಕ್ಕಿಯಾಗಿ ನವದಂಪತಿ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್ಪಿ ಬಳಿ ನಡೆದಿದೆ. ಬೈಕ್ನಲ್ಲಿದ್ದ ಬಾಬು(30) ಮತ್ತು ಸಾವಿತ್ರಿ(26) ಮೃತ ದುರ್ದೈವಿಗಳಾಗಿದ್ದು, ಹೋಟೆಲ್ ಕೆಲಸ ಮುಗಿಸಿ ಊರಿಗೆ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ಮೂಲದವರಾಗಿದ್ದು, ಇವರ ಮುದುವೆ ಆಗಿ ಕೇವಲ ಆರು ತಿಂಗಳಾಗಿತ್ತು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೋಳ ತುಂಬಿದ್ದ ಲಾರಿ ಶಿವಮೊಗ್ಗ ತರೀಕೆರೆ ಮಾರ್ಗವಾಗಿ ಹೊರಟಿದ್ದು, ದಂಪತಿ ಹೋಟೆಲ್ ಕೆಲಸ ಮುಗಿಸಿಕೊಂಡು ಬರುವಾಗ ಲಾರಿ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾರೆ. ಬಾಬು ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಓವರ್ಟೇಕ್ ಭರದಲ್ಲಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

