ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ ಕಾರ್ಯಕ್ರಮ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ ಹಾಗೂ ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ ಮಾರ್ಚ್ 26ರಂದು ಯಶಸ್ವಿಯಾಗಿ ನೆರವೇರಿತು.

ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ ಹಾಗೂ ತಂಡದ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಅಕ್ಷಯ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆದ ಶ್ರೀಮತಿ ಕಲಾವತಿ ಜಯಂತ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.























































 
 

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಜಯಂತ್ ನಡುಬೈಲು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, “ಇಂತಹ ವೇದಿಕೆಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಲು ಉತ್ತಮ ಅವಕಾಶವಾಗಿದೆ. ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಭವಿಷ್ಯವನ್ನು ರೂಪಿಸಬಹುದು” ಎಂದು ಹೇಳಿದರು.

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಇದರ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರಾಧಿಕಾ ಶೆಟ್ಟಿ ಡಿ.ಎಸ್. ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಮಾತನಾಡಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುನ್ನಡೆಯಲು ನಿರಂತರ ಅಭ್ಯಾಸ, ನೈಜ ಅನುಭವ ಹಾಗೂ ಉತ್ತಮ ಸಂವಹನ ಕೌಶಲ್ಯಗಳ ಅಗತ್ಯವನ್ನು ವಿವರಿಸಿದರು.

ಅಕ್ಷಯ ಸಮೂಹ ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಮಾತನಾಡಿ ಶ್ರಮ, ದೃಢ ನಿಶ್ಚಯ ಮತ್ತು ಅನುಭವವೇ ಯಶಸ್ಸಿನ ಮೂಲ ಎಂದು ತಿಳಿಸಿದರು.

ಹಾಗೆಯೇ ಅಕ್ಷಯ ಪಿಯು ಕಾಲೇಜ್ ನ ಪ್ರಾಂಶುಪಾಲರು ಆದ  ಗಂಗಾರತ್ನ ರವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹ ವೇದಿಕೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಸ್ಪರ್ಧೆಗಳ ಮೂಲಕ ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಹಾಗೂ ಚಟುವಟಿಕೆಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೇಳಿಯೂರುಕಟ್ಟೆ,ಇದರ ಮುಖ್ಯಗುರುಗಳು ಶ್ರೀ ಗಣೇಶ್ ಎಸ್. ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿ, ಜೀವನದಲ್ಲಿ ಶಿಸ್ತು, ಪರಿಶ್ರಮ ಮತ್ತು ಗುರಿ ಸಾಧನೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ಬಿಸಿಎ ವಿಭಾಗವು ಚಾಂಪಿಯನ್ ಹಾಗೂ ದ್ವಿತೀಯ ಫ್ಯಾಷನ್ ಡಿಜೈನ್ ವಿಭಾಗವು ರನ್ನರ್ ಅಪ್ ಸ್ಥಾನ ಪಡೆಯಿತು.

ಈ ಸಂದರ್ಭದಲ್ಲಿ ಬಿಸಿಎ ವಿಭಾಗದ ಮುಖ್ಯಸ್ಥರು ಶ್ರೀಮತಿ ದೀಕ್ಷಾ ರೈ, ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ತೃತೀಯ ಬಿಸಿಎ ವಿಭಾಗದ ಕು. ಸಾನಿಧ್ಯ ಪ್ರಾರ್ಥನೆಗೈದರು. ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ ನ ಸಂಯೋಜಕಿ ಕು. ಸೌಜನ್ಯ ಹೆಚ್ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕರು ಆದ  ಶ್ರೀ ಸರೋಶ್ ನಾಯಕ್ ಹಾಗೂ ಶ್ರೀಮತಿ ಸುಪ್ರಭ ಕೆ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಸಂಯೋಜಕ ಕಾರ್ತಿಕ್ ಪಿ ರೈ, ವಂದನಾರ್ಪಣೆ ಸಲ್ಲಿಸಿದರು. ಕು. ಮಾನ್ಯ ತೃತೀಯ ಬಿಸಿಎ ಕಾರ್ಯಕ್ರಮವನ್ನು ನಿರೂಪಿಸಿದರು.

error: Content is protected !!
Scroll to Top