ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್
ಮೂಡುಬಿದಿರೆ : ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ದಾರುಣ ಘಟನೆ ಮೂಡುಬಿದಿರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿ ನಿಂತಿದ್ದ ಲಾರಿಗೆ ಅವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ,
ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸೀನ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

























