ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು

ಚೈತ್ರ ಮಾಸದ ಕೊನೆಯ ಮಂಗಳವಾರದ ಪೂಜೆಗೆ ಸೇರಿದ್ದ ಭಕ್ತರು

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ಮಾತಾ ಮಂದಿರದಲ್ಲಿ ಇಂದು ಭೀಕರ ಕಾಲ್ತುಳಿತಸಂಭವಿಸಿ 8 ಭಕ್ತರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಮಹಿಳೆಯರಾಗಿದ್ದಾರೆ.

ನಳಂದ ಜಿಲ್ಲೆಯ ಬಿಹಾರ ಶರೀಫ್‌ನಿಂದ ಸುಮಾರು 5 ಕಿಲೋಮೀಟರ್ ದೂರದ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಇಂದು ಚೈತ್ರ ಮಾಸದ ಕೊನೆಯ ಮಂಗಳವಾರವಾದ್ದರಿಂದ, ದೇವಾಲಯದಲ್ಲಿ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದರು. ಭಾರಿ ಸಂಖ್ಯೆಯಲ್ಲಿ ಜನರಿದ್ದ ಕಾರಣ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತ ಉಂಟಾಯಿತು. ಘಟನಾ ಸ್ಥಳದಿಂದ ಫೋಟೋಗಳು ಹಲವಾರು ಮಹಿಳೆಯರು ನೆಲದ ಮೇಲೆ ಪ್ರಜ್ಞಾಹೀನರಾಗಿ ಬಿದ್ದಿರುವುದನ್ನು ತೋರಿಸಿವೆ.























































 
 
error: Content is protected !!
Scroll to Top