ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.inಗೆ ಭೇಟಿ ನೀಡಿ, ತಮ್ಮ ರಿಜಿಸ್ಟರ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಪಡೆಯಬಹುದು. ಫಲಿತಾಂಶದ ಜೊತೆಗೆ ಕಾಲೇಜುಗಳಲ್ಲಿಯೂ ಅಂಕಪಟ್ಟಿಗಳನ್ನು ಪ್ರಕಟಿಸಲು ಸೂಚಿಸಲಾಗಿದೆ.

ಹಂತ 1: ಮೊದಲಿಗೆ ಕರ್ನಾಟಕ ಪರೀಕ್ಷಾ ಫಲಿತಾಂಶದ ಅಧಿಕೃತ ವೆಬ್‌ಸೈಟ್ karresults.nic.inಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಕಾಣಿಸುವ ‘1st PUC Annual Exam Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ಈಗ ಹೊಸ ಪುಟ ತೆರೆಯುತ್ತದೆ, ಅಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು (Registration Number) ನಮೂದಿಸಿ.
ಹಂತ 4: ನಿಮ್ಮ ವಿಷಯದ ಸ್ಟ್ರೀಮ್ (Science/Arts/Commerce) ಅನ್ನು ಆಯ್ಕೆ ಮಾಡಿ.
ಹಂತ 5: ಎಲ್ಲ ವಿವರಗಳನ್ನು ಭರ್ತಿ ಮಾಡಿದ ನಂತರ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 6: ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.

ಅಂಕಗಳ ಬಗ್ಗೆ ತೃಪ್ತರಾಗದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಅಥವಾ ಉತ್ತರ ಪತ್ರಿಕೆಯ ಪರಿಶೀಲನೆಗೆ ಕೆಎಸ್‌ಇಎಬಿ ಅವಕಾಶ ನೀಡುತ್ತದೆ. ಅಭ್ಯರ್ಥಿಗಳು ಮಂಡಳಿಯು ಘೋಷಿಸಿದ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು. ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಉತ್ತೀರ್ಣರಾಗಲು ವಿಫಲರಾದ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಮಂಡಳಿಯು ಇನ್ನೂ ಪ್ರಕಟಿಸಿಲ್ಲ.























































 
 
error: Content is protected !!
Scroll to Top