ಧರ್ಮಸ್ಥಳ ಪ್ರಕರಣ : ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ಎಐ ವಿಡಿಯೋ ಮೂಲಕ ಧರ್ಮಸ್ಥಳದ ತೇಜೋವಧೆ ಮಾಡಿದ್ದ ಸಮೀರ್‌

ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ಧಿಮತ್ತೆ ನೆರವಿನಿಂದ ವಿಡಿಯೋ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್‌ ಮೊಹಮ್ಮದ್‌ ಸಮೀರ್‌ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆ ನೀಡಿದೆ.

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಧರ್ಮಸ್ಥಳ ಠಾಣೆಯಲ್ಲಿ ಸಮೀರ್‌ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ತಡೆ ನೀಡಿತು.ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್‌ 22ಕ್ಕೆ ಮುಂದೂಡಿತು.























































 
 

ಸಮೀರ್‌ ಪರ ವಕೀಲೆ ಕೆ.ಅಕ್ಷತಾ ಶೆಟ್ಟಿ ವಾದ ಮಂಡಿಸಿ ಯೂಟ್ಯೂಬ್‌ ಚಾನಲ್‌ ಓಪನ್‌ ಮಾಡಿದಾಗ, ಸಮೀರ್‌ ವಿಡಿಯೋ ಬಂದಿತ್ತು. ಸುಳ್ಳುಗಳನ್ನು ಬಿತ್ತರಿಸಿದ್ದಾರೆ ಎಂದು ಹೇಳಲಾಗಿದೆ. ಸಮೀರ್‌ ಸಾರ್ವಜನಿಕರ ನೆಮ್ಮದಿಗೆ ಹಾಳು ಮಾಡಿದ್ದಾನೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಎಂದರು.

ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕಿ ಅಸ್ಮಾ ಕೌಸರ್, ಸಮೀರ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣವಲ್ಲ. ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದ್ದಾಗಿದೆ ಸಾಕ್ಷಿ ದೂರುದಾರನನ್ನು ಸಂರಕ್ಷಿಸಿದ್ದ ಪ್ರಕರಣ ಇದಾಗಿದ್ದು, ಅದಾಗ್ಯೂ ಕೃತಕ ಬುದ್ಧಿಮತ್ತೆ ನೆರವಿನಿಂದ ಸಮೀರ್‌ ವಿಡಿಯೊ ಮಾಡಿದ್ದಾರೆ. ಕೆಲವು ಶವಗಳನ್ನು ಅಲ್ಲಿ ಹೂಳಲಾಗಿದ್ದು, ಕೆಲವನ್ನು ಅಲ್ಲಿ ಸಂಸ್ಕಾರ ಮಾಡಲಾಗಿದೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ ಎಂದರು.

ಸಮೀರ್‌ ವಿರುದ್ಧ ಐದು ಪ್ರಕರಣ ದಾಖಲಾಗಿವೆ. ತನಿಖೆ ನಡೆಯಲಿ, ಸತ್ಯ ಹೊರಬರಲಿದೆ. ಇದೇ ಮೊದಲ ಬಾರಿಗೆ ಸಮೀರ್‌ ಈ ಕೆಲಸ ಮಾಡುತ್ತಿಲ್ಲ. ಸಾರ್ವಜನಿಕರನ್ನು ದಾರಿ ತಪ್ಪಿಸಿ, ದ್ವೇಷದ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ್ದಾನೆ ಎಂದರು.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ತನಿಖೆಗೆ ಸಂಬಂಧಿಸಿದ ಪ್ರಕರಣದ ಕುರಿತು ಕಾಲ್ಪನಿಕ ವಿಚಾರಗಳನ್ನು ಸೃಷ್ಟಿಸಿ, ಕೃತಕ ಬುದ್ಧಿಮತ್ತೆಯ ನೆರವಿನಿಂದ ವಿಡಿಯೋ ಮಾಡಿ ಹರಿಯ ಬಿಡಲಾಗಿದೆ. ಫಿರ್ಯಾದಿ ಸಾಕ್ಷಿಯಾಗಿದ್ದ ಚನ್ನಯ್ಯನಿಗೆ ಸಾಕ್ಷಿದಾರರ ಸಂರಕ್ಷಣೆ ಯೋಜನೆಯಡಿ ರಕ್ಷಣೆ ಒದಗಿಸಲಾಗಿತ್ತು. ಅವರ ಗುರುತು ಬಹಿರಂಗಪಡಿಸುವಂತಿರಲಿಲ್ಲ.

ಸಮೀರ್‌ ತನ್ನ ವಿಡಿಯೊದಲ್ಲಿ “ಸಾವಿರ ಜನರನ್ನು ರೇಪ್‌ ಮಾಡಿ ಕೊಲೆ ಮಾಡಿ ಮುಚ್ಚಿ ಹಾಕಿದ್ದಾರೆ. ಇದನ್ನು ಕೇಳಿದರೆ ನಿಮ್ಮ ರಕ್ತ ಕುದಿತಿಲ್ವಾ ಕರ್ನಾಟಕದ ಮೂಲೆ ಮೂಲೆಯಲ್ಲಿರುವವರು ಬೀದಿಗಿಳಿದು ಪ್ರತಿಭಟನೆ ಮಾಡಬೇಕು ಮತ್ತು ಇದರ ವಿರುದ್ಧ ಪ್ರತಿಯೊಬ್ಬರು ಧ್ವನಿ ಎತ್ತಬೇಕು” ಎಂಬ ಸಂದೇಶ ನೀಡಿದ್ದನು. ಈ ಮೂಲಕ ದೊಂಬಿ, ಸಾರ್ವಜನಿಕ ಶಾಂತಿಗೆ ಭಂಗ ತರುವ ಕೃತ್ಯ ಎಸಗಿದ್ದಾನೆ ಎಂದು ಧರ್ಮಸ್ಥಳದ ಪೊಲೀಸರು ಸ್ವಯಂಪ್ರೇರಿತವಾಗಿ 2025ರ ಜುಲೈ 12ರಂದು ಬಿಎನ್‌ಎಸ್‌ ಸೆಕ್ಷನ್‌ 240, 192, 353(1)(b) ಅಡಿ ಸಮೀರ್‌ ಮತ್ತು ದೂತ ಯೂಟ್ಯೂಬ್‌ ಚಾನಲ್‌ ವಿರುದ್ಧ ಪ್ರಕರಣ ದಾಖಲಿಸಿದ್ದರು.

error: Content is protected !!
Scroll to Top