ಚುನಾವಣೆಗೆ ಸ್ಪರ್ಧಿಸದಿರುವುದು ನನ್ನದೇ ನಿರ್ಧಾರ : ಅಣ್ಣಾಮಲೈ ಸ್ಪಷ್ಟನೆ

ಟಿಕೆಟ್‌ ನಿರಾಕರಣೆ ಬರೀ ಗುಲ್ಲು ಎಂದ ಮಾಜಿ ಅಧ್ಯಕ್ಷ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದೆ ಎಂದು ಗುಲ್ಲೆಬ್ಬಿಸಿರುವ ಕುರಿತು ಸ್ಪಷ್ಟೀಕರಣ ನೀಡಿರುವ ತಮಿಳುನಾಡು ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ಅಣ್ಣಾಮಲೈಸ್ಪರ್ಧಿಸದಿರುವುದು ನನ್ನದೇ ನಿರ್ಧಾರ ಎಂದಿದ್ದಾರೆ.

ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನು ನಿರ್ಧರಿಸಿದ್ದೇನೆ. ಪಕ್ಷದ ಕೋರ್ ಕಮಿಟಿಗೆ ಈ ನಿರ್ಧಾರವನ್ನ ಮುಂಚಿತವಾಗಿ ತಿಳಿಸಿದ್ದೇನೆ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಲಿಖಿತವಾಗಿ ಕೊಟ್ಟಿದ್ದೇನೆ. ಇದಿಷ್ಟಕ್ಕೇ ನನಗೆ ಟಿಕೆಟ್‌ ನಿರಾಕರಿಸಲಾಗಿದೆ ಎಂದರ್ಥವಲ್ಲ, ಸ್ಪರ್ಧೆ ಮಾಡದಿರಲು ನಾನೇ ನಿರ್ಧಾರ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.





















































 
 

ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ 27 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಬಿಡುಗಡೆಗೊಳಿಸಿದ ನಂತರ ಈ ಬೆಳವಣಿಗೆ ಕಂಡುಬಂದಿದೆ. ಇದಕ್ಕೆ ಸ್ಪಷ್ಟನೆ ನೀಡುವ ಅಗತ್ಯವಿರಲಿಲ್ಲ. ಆದ್ರೆ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದ್ದರಿಂದ ನಾನಿಲ್ಲಿ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ನನ್ನ ನಿರ್ಧಾರವನ್ನ ಗೌರವಿಸಿದ್ದಕ್ಕಾಗಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನ ಬೆಂಬಲಿಸಿ ಪ್ರಚಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಬಿಜೆಪಿ ನಾಯಕತ್ವಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಧನ್ಯವಾದ ಅರ್ಪಿಸಿದ್ದಾರೆ.

error: Content is protected !!
Scroll to Top