ಭಾರತಕ್ಕೆ ಧಾರಾಳ ತೈಲ ಪೂರೈಕೆ : ರಷ್ಯಾ ಭರವಸೆ

ಸಾಕಷ್ಟು ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ರಷ್ಯಾ ಸಿದ್ಧ

ನವದೆಹಲಿ: ಹಾರ್ಮುಜ್‌ ಜಲಸಂಧಿಯ ಬಿಕ್ಕಟ್ಟು ಪೂರ್ಣ ಪ್ರಮಾಣದಲ್ಲಿ ಇನ್ನೂ ಬಗೆಹರಿಯದ ಹಿನ್ನೆಲೆ ಭಾರತ, ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದೆ. ಈಗಾಗಲೇ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಭಾರತ ಸುಮಾರು 6 ಕೋಟಿ ಬ್ಯಾರಲ್‌ ಕಚ್ಚಾ ತೈಲವನ್ನು ರಷ್ಯಾದಿಂದ ಖರೀದಿಸಿದೆ. ಇದರ ಮಧ್ಯೆ ಆಪತ್ಭಾಂದವ ರಷ್ಯಾ ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ ಎಂದು ಭರವಸೆ ನೀಡಿದೆ.

ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಇಂಧನ ಬಿಕ್ಕಟ್ಟು ಇನ್ನಷ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆ ಭಾರತಕ್ಕೆ ಅಗತ್ಯವಿರುವ ಕಚ್ಚಾತೈಲ ಮತ್ತು ಎಲ್‌ಎನ್‌ಜಿ ದ್ರವೀಕೃತ ನೈಸರ್ಗಿಕ ಅನಿಲ ಪೂರೈಕೆಯನ್ನು ಹೆಚ್ಚಿಸಬಹುದು. ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ ಎಂದು ರಷ್ಯಾ ಹೇಳಿದೆ.





















































 
 

ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ರಷ್ಯಾದ ಉಪಾಧ್ಯಕ್ಷ ಡೆನಿಸ್ ಮಾಂಟುರೊವ್ ಭಾರತದಿಂದ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ರಷ್ಯಾದ ಕಂಪನಿಗಳು ಇಂಧನ ರಫ್ತುಗಳನ್ನು ಸ್ಥಿರವಾಗಿ ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದ್ದಾರೆ.

ಇನ್ನೂ ಭಾರತದಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಹೇಳಿಕೆಯ ಪ್ರಕಾರ 2025ರ ಅಂತ್ಯದ ವೇಳೆಗೆ ರಷ್ಯಾ ಭಾರತಕ್ಕೆ ಖನಿಜ ರಸಗೊಬ್ಬರಗಳ ಪೂರೈಕೆಯನ್ನು ಶೇ.40ರಷ್ಟು ಹೆಚ್ಚಿಸಿದೆ. ಅದರಂತೆ ಭಾರತದ ಅವಶ್ಯಕತೆ ಪೂರೈಸುವುದನ್ನು ಮುಂದುವರಿಸಲು ಮಾಸ್ಕೊ ಸಿದ್ಧವಾಗಿದೆ ಎಂದು ಮಾಂಟುರೊವ್ ಹೇಳಿದ್ದಾರೆ.

ರಷ್ಯಾದ ತೈಲ ಕಂಪನಿಗಳು ಭಾರತೀಯ ಮಾರುಕಟ್ಟೆಗೆ ತೈಲ ಮತ್ತು ಎಲ್‌ಎನ್‌ಜಿ (ದ್ರವೀಕೃತ ನೈಸರ್ಗಿಕ ಅನಿಲ) ಸರಬರಾಜನ್ನು ಪೂರೈಸಲು ಉತ್ಪಾದನೆ ಹೆಚ್ಚಿಸುವ ಸಾಮರ್ಥ್ಯ ಹೊಂದಿವೆ. ಪರಮಾಣು ಶಕ್ತಿಯಲ್ಲಿ ತಮ್ಮ ಪಾಲುದಾರಿಕೆ ಬಲಪಡಿಸುವುದನ್ನೂ ಉಭಯ ರಾಷ್ಟ್ರಗಳು ಮುಂದುವರಿಸುತ್ತವೆ. ಜೊತೆಗೆ ಒಪ್ಪಿತ ಅವಧಿಗೆ ಅನುಗುಣವಾಗಿ ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರಕ್ಕೆ ವಿದ್ಯುತ್ ಘಟಕಗಳನ್ನು ನಿರ್ಮಿಸುವ ಯೋಜನೆಯನ್ನು ಕಾರ್ಯಗತಗೊಳಿಸಲಿದೆ ಎಂದು ಇರಾನ್‌ ರಾಯಭಾರ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನೂ ಯೂರಿಯಾ ಉತ್ಪಾದನೆಗಾಗಿ ಜಂಟಿ ಯೋಜನೆಯು ಅಭಿವೃದ್ಧಿ ಹಂತದಲ್ಲಿರುವುದನ್ನು ಗಮನಿಸಿದ ಮಂಟುರೊವ್‌, ಇದು ಎರಡೂ ರಾಷ್ಟ್ರಗಳ ನಡುವಿನ ದೀರ್ಘಕಾಲೀನ ಕೃಷಿ ಸಹಕಾರವನ್ನ ಬೆಂಬಲಿಸುವ ನಿರೀಕ್ಷೆಯಿದೆ ಎಂದು ಪುನರುಚ್ಚರಿಸಿದರು.

ಹಾರ್ಮುಜ್‌ ಬಿಕ್ಕಟ್ಟಿನ ನಂತರ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಹೆಚ್ಚಿಸುತ್ತಲೇ ಇದೆ. ಫೆಬ್ರವರಿಗಿಂತ ಮಾರ್ಚ್‌ ತಿಂಗಳ ಅವಧಿಯಲ್ಲಿ ತೈಲ ಖರೀದಿ ಹೆಚ್ಚಳವನ್ನು ಶೇ.90 ರಷ್ಟಯ ಹೆಚ್ಚಿಸಿದೆ ಎಂದು ವರದಿಗಳು ತಿಳಿಸಿವೆ.

error: Content is protected !!
Scroll to Top