ನೇತ್ರಾವತಿ ಬಂಗ್ಲೆಗುಡ್ಡೆಯಲ್ಲಿ ಕಂಡು ಬಂದ ಪುರುಷನ ಮೃತದೇಹ
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

























