ಕಡಬ: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ಕಳೆದ ಸುಮಾರು 3 ವರ್ಷಗಳಿಂದ ಗಂಡನಿಂದ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದರು. ಈ ನಡುವೆ ಆರೋಪಿ ಪ್ರಭಾಕರ ಪಿ. ಅವರೊಂದಿಗೆ ಪರಿಚಯವಾಗಿ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ.
ಏ.3ರಂದು ರಂದು ಮಹಿಳೆ ಆರೋಪಿಯೊಂದಿಗೆ ಮಾತನಾಡಲು ಅವರ ಮನೆಗೆ ತೆರಳಿದ ವೇಳೆ ಆರೋಪಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 37/2026ರಡಿ ಕಲಂ 115(2), 352, 74, 351(2) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

