ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಪುತ್ತೂರು: ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಎಲೈಟ್ ಅಸೋಸಿಯೇಷನ್ ಹಾಗೂ ಭಾರತ್ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ( ಬೇಸ್), ಮಂಗಳೂರು ಜಂಟಿಯಾಗಿ ಆರಂಭಿಸಿದ ತ್ರೀಡಿಎಸ್ ಮ್ಯಾಕ್ಸ್ ಮತ್ತು ತ್ರೀಡಿ ರೆಂಡರಿಂಗ್ ಎಂಬ ವಿಷಯದಲ್ಲಿ ನಡೆದ ಕಾರ‍್ಯಗಾರದ ಪ್ರಮಾಣ ಪತ್ರ ವಿತರಣಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಬೇಸ್ ನ ಸ್ಥಾಪಕ ನವೀನ್ ಗುರುರಾಜ್ ಶಿಕ್ಷಣದ ಜೊತೆಗೆ ಸ್ವಯಂ ಅಭಿವೃದ್ಧಿಗೆ ಒತ್ತು ಕೊಡಬೇಕಾಗಿ ಸಲಹೆ ನೀಡಿ ವಿದ್ಯರ‍್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ವಹಿಸಿ ಮಾತನಾಡಿ, ಸತತವಾಗಿ ಮೂರು ವರ್ಷದಿಂದ ಇಂತಹ ಸರ್ಟಿಫಿಕೇಟ್ ಕೋರ್ಸ್ಗಳನ್ನು ವಿದ್ಯಾರ್ಥಿಗಳಿಗೆ ನೀಡುತಿದ್ದು, ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೆಚ್ಚು ಉಪಯುಕ್ತವಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಸರ್ಟಿಫಿಕೇಟ್ ಕೋರ್ಸ್ಗಳನ್ನು ಆರಂಭಿಸುವುದಾಗಿ ತಿಳಿಸಿದರು.























































 
 

ಕಾಲೇಜಿನ ಉಪ ಪ್ರಾಂಶುಪಾಲ, ಇಂಟೀರಿಯರ್ ಡಿಸೈನ್ ವಿಭಾಗದ ಮುಖ್ಯಸ್ಥ ರಕ್ಷಣ್ ಟಿ. ಆರ್. ಪ್ರಾಸ್ತಾವಿಕ ನುಡಿಯನ್ನು ನುಡಿದರು.

ಕಾಲೇಜಿನ ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ., ಬೇಸ್ ನ ಸಹ ಸಂಸ್ಥಾಪಕಿ ರಚನಾ ಉಪಸ್ಥಿತರಿದ್ದರು.

ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

error: Content is protected !!
Scroll to Top