ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರನ್ನು ಸಾಯಿಸಲು ಮುಸ್ಲಿಮರಿಗೆ ಕರೆ : ಖರ್ಗೆ ವಿರುದ್ಧ ದೂರು ದಾಖಲು

ಅಸ್ಸಾಂ ಚುನಾವಣೆ ಪ್ರಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಖರ್ಗೆ

ದಿಸ್ಪುರ್: ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.

ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿ.ಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ.























































 
 

ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ ಮಲ್ಲಿಕಾರ್ಜುನ ಖರ್ಗೆ ಹಿಂಸೆಗೆ ಪ್ರಚೋದನೆ ನೀಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಇಡೀ ದೇಶದಲ್ಲಿ ಪ್ರತಿಭಟನೆಗೆ ಬಿಜೆಪಿ ಸಜ್ಜಾಗಿದೆ. ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಸಂವಿಧಾನ ವಿರೋಧಿ. ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆಗೆ ನಿದ್ದೆ ಬರುತ್ತಿಲ್ಲ. ಕಣ್ಣು ಮುಚ್ಚಿದರೆ ಅವರಿಗೆ ಕಾಣಿಸುವುದು ಆರ್‌ಎಸ್‌ಎಸ್. ಆರ್‌ಎಸ್‌ಎಸ್ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ಕೊಡುತ್ತಾರೆ. ಅವರು ನೆಮ್ಮದಿಯಿಂದ ನಿದ್ದೆ ಮಾಡಬೇಕೆಂದರೆ ದಯವಿಟ್ಟು ಆರ್‌ಎಸ್‌ಎಸ್ ಕಚೇರಿಗೆ ಹೋಗಿ ಅಲ್ಲಿ ಕೆಲಸ ಮಾಡಲಿ. ನಾಗಪುರಕ್ಕಾದರೂ ಹೋಗಲಿ ಅಥವಾ ಕೇಶವಕೃಪಾಕ್ಕಾದರೂ ಹೋಗಲಿ. ಆಗ ಅವರಿಗೆ ನಿದ್ದೆ ಬರುತ್ತದೆ. ಒಂದು ತಿಂಗಳು ನೀವು ಅಲ್ಲಿ ಕೆಲಸ ಮಾಡಿದರೆ ಬುದ್ಧಿ ಬರುತ್ತದೆ ಎಂದು ಕಿಡಿಕಾರಿದ್ದಾರೆ.

ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್ ಅಥವಾ ಬಿಜೆಪಿ ಕೂಡ ಅದೇ ರೀತಿಯ ಹಾವು, ಅವನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆ ಸಂಬಂಧ ಖರ್ಗೆ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಗಳು ವ್ಯಕ್ತವಾಗುತ್ತಿವೆ. ಖರ್ಗೆ ವಿರುದ್ಧ ಬಿಜೆಪಿ ದೇಶಾದ್ಯಂತ ಪ್ರತಿಭಟನೆಗೆ ಸಜ್ಜಾಗಿದೆ.

error: Content is protected !!
Scroll to Top