ಕಲಬುರ್ಗಿ: ಹಾಗರಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವರ ಜಾತ್ರೆಯ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಮೃತನನ್ನು ವಿನೋದ್ ರೆಡ್ಡಿ ಎಂದು ಗುರುತಿಸಲಾಗಿದೆ. ರಥದ ಹಗ್ಗವನ್ನು ಎಳೆಯುತ್ತಿದ್ದ ವೇಳೆ ಅಯತಪ್ಪಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ರಥದ ಚಕ್ರ ವಿನೋದ್ ಅವರ ತೊಡೆಯ ಮೇಲೆ ಚಲಿಸಿದ್ದು, ಪರಿಣಾಮ ಅವರಿಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿದ ಹಾಗೆ ಫರಹತ್ತಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

























