ಹತ್ತೂರೊಡೆಯ ಪುತ್ತೂರು ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣ

ಪುತ್ತೂರು: ಇತಿಹಾಸ ಪ್ರಸಿದ್ಧ ಹತ್ತೂರೊಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ ದೊರೆತಿದೆ.

ಧ್ವಜಾರೋಹಣದ ಮೂಲಕ ಭಕ್ತಿ ಭಾವದ ಹತ್ತು ದಿನಗಳ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಬ್ರಹ್ಮಶ್ರೀ ‌ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಅದ್ಧೂರಿ ಜಾತ್ರೆ ಇಂದಿನಿಂದ ಆರಂಭವಾಗಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಭಕ್ತರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಾತ್ರೋತ್ಸವದ ಧ್ವಜಾರೋಹಣವನ್ನು ಕಣ್ತುಂಬಿಕೊಂಡರು. ಮುಂದಿನ ಹತ್ತು ದಿನಗಳ ಕಾಲ ಈ ಜಾತ್ರೆ ನಡೆಯಲಿದ್ದು, ಲಕ್ಷಾಂತರ ಭಕ್ತರು ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವರ ದರ್ಶನ ಪಡೆಯಲಿದ್ದಾರೆ.























































 
 

ಎ. 17 ರಂದು ಪುತ್ತೂರು ಜಾತ್ರೆಯ ವಿಶೇಷವಾದ, ಪ್ರಸಿದ್ಧ ಬೆಡಿಸೇವೆ ‌ನಡೆಯಲಿದೆ. ಇದು ಜಾತ್ರೆಯ ಮುಖ್ಯ ಆಕರ್ಷಣೆಯಾಗಿದ್ದು ಈ‌ ಸಂದರ್ಭಕ್ಕೆ ಲಕ್ಷೋಪಲಕ್ಷ ಭಕ್ತರು ಸಾಕ್ಷಿಗಳಾಗಲಿದ್ದಾರೆ.

error: Content is protected !!
Scroll to Top