ಇಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್‌ ಕದನ ವಿರಾಮ ಮಾತುಕತೆ

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಮಾತುಕತೆ ಮೇಲೆ ಜಗತ್ತಿನ ದೃಷ್ಟಿ

ಇಸ್ಲಾಮಾಬಾದ್ : ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆರಂಭಗೊಂಡಿದೆ. ಈ ಮಹತ್ವದ ಸಭೆಯಲ್ಲಿ ಅಮೆರಿಕವನ್ನು ಉಪಾಧ್ಯಕ್ಷ ಜೆಡಿ ಬ್ಯಾನ್ಸ್ ಪ್ರತಿನಿಧಿಸುತ್ತಿದ್ದರೆ, ಇರಾನ್ ಸ್ಪೀಕರ್ ಮೊಹಮ್ಮದ್ ಭಗರ್ ಭಾಗಿಯಾಗಿದ್ದಾರೆ. ಮಾತುಕತೆಗೂ ಮುನ್ನ ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿತ್ತು. ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳು ಮತ್ತು ಅವುಗಳ ಷರತ್ತುಗಳ ಕುರಿತು ಇಂದು ಚರ್ಚೆ ನಡೆಯಲಿದೆ.

ನಾಯಕರ ಸುರಕ್ಷತೆ ದೃಷ್ಟಿಯಿಂದ ಇಸ್ಲಾಮಾಬಾದ್ ನಗರವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ. ಸಭೆ ನಡೆಯುವ ಸೆರೆನಾ ಹೋಟೆಲ್ ಸುತ್ತಮುತ್ತ ಮೂರು ಕಿಲೋಮೀಟರ್ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಭದ್ರತೆಗಾಗಿ 11,000 ಸೈನಿಕರನ್ನು ನಿಯೋಜಿಸಲಾಗಿದೆ. ಸಭೆಗೂ ಮುನ್ನವೇ ಅಮೆರಿಕದ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಗಾಲಿಬಾಫ್ ಹೇಳಿಕೆ ನೀಡಿರುವುದು ಸಭೆಯ ಫಲಿತಾಂಶದ ಬಗ್ಗೆ ಕುತೂಹಲ ಮೂಡಿಸಿದೆ.























































 
 

ಇರಾನ್ ಮತ್ತು ಅಮೆರಿಕದ ನಿಲುವುಗಳಲ್ಲಿನ ಪ್ರಮುಖ ವ್ಯತ್ಯಾಸಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ತಕ್ಷಣಕ್ಕೆ ದೊಡ್ಡ ಪ್ರಗತಿ ನಿರೀಕ್ಷಿಸಲಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೂ ಶಾಶ್ವತ ಶಾಂತಿ ಒಪ್ಪಂದದತ್ತ ಸಾಗುವ ಆಳವಾದ ಮಾತುಕತೆಗಳನ್ನು ಮುಂದುವರಿಸಲು ಒಪ್ಪಂದವಾಗುವುದು ಜಾಗತಿಕ ಮಟ್ಟದಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವ ಪ್ರಮುಖ ಬೆಳವಣಿಗೆಯಾಗಬಹುದು ಎಂಬ ಆಶಾವಾದವನ್ನು ಪಾಕಿಸ್ತಾನ ವ್ಯಕ್ತಪಡಿಸಿದೆ.

ಶುಕ್ರವಾರ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಇಸ್ಲಾಮಾಬಾದ್‌ಗೆ ಆಗಮಿಸಿದ್ದು, ಅವರು ಅಮೆರಿಕದ ತಂಡವನ್ನು ಮುನ್ನಡೆಸಲಿದ್ದಾರೆ. ಈ ತಂಡದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಖ್ಯ ಸಮಾಲೋಚಕ ಸ್ಟೀವ್ ವಿಟ್ಕಾಫ್ ಹಾಗೂ ಅಳಿಯ ಜೇರೆಡ್ ಕುಶ್ನರ್ ಕೂಡ ಸೇರಿದ್ದಾರೆ. ಇರಾನ್‌ ತಂಡವನ್ನು ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಮತ್ತು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಘಾಲಿಬಾಫ್ ಟೆಹ್ರಾನ್ ತಂಡವನ್ನು ಮುನ್ನಡೆಸುತ್ತಿದ್ದಾರೆ. 70 ಪ್ರತಿನಿಧಿಗಳೊಂದಿಗೆ ಅವರು ಇಸ್ಲಾಮಾಬಾದ್‌ಗೆ ಆಗಮಿಸಿದ್ದಾರೆ.

ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವೇ ದಿನಗಳ ಬಳಿಕ ಈ ಮಾತುಕತೆಗಳು ನಡೆಯುತ್ತಿದೆ.

ಫೆಬ್ರವರಿ 28ರಂದು ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯೊಂದಿಗೆ ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಯುದ್ಧ ಪ್ರಾರಂಭಿಸಿದ ಆರು ವಾರಗಳ ನಂತರ ಈ ಮಾತುಕತೆ ನಡೆಯುತ್ತಿರುವುದು ಗಮನಾರ್ಹವಾಗಿದೆ. ಮಧ್ಯಸ್ಥಿಕೆಯ ಪ್ರಯತ್ನದ ಬಗ್ಗೆ ಹತ್ತಿರದಿಂದ ಬಲ್ಲ ತಜ್ಞರು ಶನಿವಾರ ಯಾವುದೇ ಪ್ರಮುಖ ಪ್ರಗತಿ ನಿರೀಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಹೆಚ್ಚು ವಾಸ್ತವಿಕ ಮಿತಿಯನ್ನು ನಿಗದಿಪಡಿಸುವ ಮೂಲಕ ಶಾಶ್ವತ ಶಾಂತಿ ಒಪ್ಪಂದವನ್ನು ಕಂಡುಕೊಳ್ಳುವ ಗುರಿಯೊಂದಿಗೆ ಆಳವಾದ ಮಾತುಕತೆ ನಡೆಯಲಿದೆ.

error: Content is protected !!
Scroll to Top