ಟಿಪ್ಪರ್‌ ಡಿಕ್ಕಿ : ಸ್ಕೂಟಿ ಸವಾರ ಸಾವು

ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ.

ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ ಮುಳಿಹಿತ್ಲು ಬಳಿ ವಾಸವಾಗಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು, ಸವಾರನಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.























































 
 

error: Content is protected !!
Scroll to Top