ಗರ್ಭಿಣಿ ಸಾವು: ಬಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಳಗಾವಿ: ಗರ್ಭಿಣಿ ಮಹಿಳೆಯೊಬ್ಬರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತ ಮಹಿಳೆಯನ್ನು ತುರಮುರಿ ಗ್ರಾಮದ ಈರಮ್ಮ ‌ಶಿಗೀಹಳ್ಳಿ(21) ಎಂದು ಗುರುತಿಸಲಾಗಿದೆ.

ಈರಮ್ಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದಾಗಿಂದಲೂ ಅಲ್ಲಿ ಅವರಿಗೆ ಸರಿಯಾದ ಚಿಕಿತ್ಸೆ ದೊರೆತಿಲ್ಲ. ಯಾರೂ ಅವರನ್ನು ಸರಿಯಾಗಿ ಪರೀಕ್ಷಿಸಿಲ್ಲ ಎಂದು ಕುಟುಂಬಸ್ಥರು ಆಕ್ರೊಶ ವ್ಯಕ್ತಪಡಿಸಿದ್ದಾರೆ.























































 
 

ಇದರಿಂದ ಈರಮ್ಮ ಅವರು ಮೃತಪಟ್ಟಿದ್ದಾರೆ. ಹೊಟ್ಟೆಯಲ್ಲಿದ್ದ ಮಗು ಸಹ ಮೃತಪಟ್ಟಿದೆ. ಸಹಿ ಹಾಕಿ ಶವವನ್ನು ತೆಗೆದುಕೊಂಡು ಹೋಗುವಂತೆ ಆಸ್ಪತ್ರೆಯವರು ಒತ್ತಾಯಿಸಿದ್ದಾರೆ ಎಂದು ಕುಟುಂಬ ಸದಸ್ಯರು ದೂರಿದ್ದಾರೆ.

error: Content is protected !!
Scroll to Top