ಮಹಿಳೆಗೆ ಅಗೌರವ, ಜೀವ ಬೆದರಿಕೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದೂರವಾಣಿ ಮೂಲಕ ಮಹಿಳೆಗೆ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿ ಬಂಟ್ವಾಳದ ಲೀಲಾವತಿ (71) ಅವರು ದೂರು ನೀಡಿದ್ದಾರೆ.

ತಿಮರೋಡಿ ಫೋನ್ ಮೂಲಕ ಅತ್ಯಂತ ಕೀಳು ಮಟ್ಟದಲ್ಲಿ ಮಾತನಾಡಿ ಮಹಿಳೆಯ ತೇಜೋವಧೆ ಮಾಡಿದ್ದಾರೆ. ಮಹಿಳೆಯ ಗೌರವಕ್ಕೆ ಧಕ್ಕೆ ತರುವ ರೀತಿ ಮಾತನಾಡಿದ್ದು ಮಾತ್ರವಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ಈ ಅಡಿಯೋ ಸಹ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.























































 
 

error: Content is protected !!
Scroll to Top